ಮುಂಡಗೋಡ: ಗೋಡೆ ಕುಸಿದು ಕೂಲಿ ಕಾರ್ಮಿಕ ಮೃತ್ಯು

Update: 2018-07-14 14:42 GMT

ಮುಂಡಗೋಡ,ಜು.14: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡ ನೆಲಸಮ ಮಾಡುತ್ತಿದ್ದ ವೇಳೆ ಗೋಡೆಯು ಕೂಲಿ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನಂದಿಗಟ್ಟಾ ಗ್ರಾಮದವರಾದ ಶೌಕತ್ ಅಲಿ ತಡಸ್ ಹಾಗೂ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಹನಮಂತ ಕಟ್ಟಿಮನೆ ಎಂದು ತಿಳಿದುಬಂದಿದೆ. ತಕ್ಷಣವೇ ಗ್ರಾಮಸ್ಥರು ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News