ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಮನೋವೈಜ್ಞಾನಿಕ ಕಾರ್ಯಾಗಾರ
ಮೂಡುಬಿದಿರೆ, ಜು.14: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ ಮನೋವೈಜ್ಞಾನಿಕ ಕಾರ್ಯಾಗಾರ ನಡೆಯಿತು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರ್ಫ್ರಾಝ್ ಜೆ ಹಾಶಿಮ್ ಮಾತನಾಡುತ್ತ ಮಾನವನ ಬುದ್ಧಿಶಕ್ತಿ ಅಗಾಧವಾಗಿದ್ದು, ಮನಸ್ಸು ವಿವಿಧ ಪ್ರಭಾವಗಳಿಗೆ ಒಳಗಾಗುತ್ತದೆ. ಅದನ್ನು ನಮ್ಮ ಹಿಡಿತದಲ್ಲಿರಿಸಿಕೊಂಡು ಸಕಾರಾತ್ಮಕವಾಗಿ ಆಲೋಚಿಸಿದರೆ ಕಾರ್ಯ ಸಾಧ್ಯವಾಗುತ್ತದೆ. ಉತ್ತಮ ಸಾಧನೆ ಮಾಡಲು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಜೀವನವನ್ನು ಸಾರ್ಥಕಪಡಿಸಿಕೊಳ್ಳುವುದು ಹೇಗೆಂದು ವಿವರವಾಗಿ ತಿಳಿಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸಂಮೋಹನ ವಿದ್ಯೆಯನ್ನು ಪ್ರಾತ್ಯಕ್ಷಿಕೆ ನೀಡಿದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಅಂಗ್ಲಭಾಷಾ ಉಪನ್ಯಾಸಕ ವಿಕ್ರಮ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.