×
Ad

ಮೈಸೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Update: 2018-07-14 23:20 IST

ಮೈಸೂರು,ಜು.14: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜಿನ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ವಿಟಿಯು ಕಾಲೇಜು ವಿದ್ಯಾರ್ಥಿ ಜಯಕುಮಾರ್(25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೂಲತಃ ರಾಯಚೂರು ಜಿಲ್ಲೆಯವನಾದ ಈತ ನಗರದ ವಿಟಿಯು ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತ ಕಾಲೇಜಿನ ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News