ಪಶ್ಚಿಮ ಬಂಗಾಳ: ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕುಸಿದ ಪೆಂಡಾಲ್; 15 ಮಂದಿಗೆ ಗಾಯ

Update: 2018-07-16 09:13 GMT

ಪಶ್ಚಿಮ ಬಂಗಾಳ, ಜು.16: ಇಲ್ಲಿನ ಮಿದ್ನಾಪೋರ್ ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪೆಂಡಾಲ್ ಒಂದು ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಮೋದಿ ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ಬೆಳಗ್ಗಿನಿಂದಲೇ ಜೋರಾಗಿ ಮಳೆ ಸುರಿಯುತ್ತಿದ್ದುದರಿಂದ ಪೆಂಡಾಲ್ ಕುಸಿದಿದೆ ಎನ್ನಲಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಮಹಿಳೆಯರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News