ಬೆಂಗಳೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-07-16 13:36 GMT

ಬೆಂಗಳೂರು, ಜು.16: ಜೀವನದಲ್ಲಿ ಜಿಗುಪ್ಸೆಗೊಂಡು ಕಾರು ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕಾಡುಗೋಡಿಯ ಸ್ಲಂಬೋರ್ಡ್‌ನ ಅಂತೋನಿರಾಜ್(30) ಆತ್ಮಹತ್ಯೆ ಮಾಡಿಕೊಂಡಿರುವ ಕಾರು ಚಾಲಕ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಅಂತೋನಿರಾಜ್, ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News