×
Ad

ಮಂಗಳೂರು: ಕೋಮುದ್ವೇಷ ಹರಡುತಿದ್ದ ಆರೋಪಿ ಸೆರೆ

Update: 2018-07-16 21:27 IST

ಮಂಗಳೂರು, ಜು.16: ನಗರದ ಕಾಲೇಜ್‌ವೊಂದಕ್ಕೆ ಸಂಬಂಧಪಟ್ಟಂತೆ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಕೋಮುದ್ವೇಷ ಹರಡುತಿದ್ದ ಆರೋಪದಲ್ಲಿ ಓರ್ವನನ್ನು ಬಂದರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಣಾಜೆಯ ಅಸೈಗೋಳಿ ನಿವಾಸಿ ಆಶಿಷ್ ಬಂಧಿತ ಆರೋಪಿ.

ಜು.15ರಂದು ನಗರದ ಕಾಲೇಜ್‌ವೊಂದಕ್ಕೆ ಸಂಬಂಧಪಟ್ಟಂತೆ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಮುಸ್ಲಿಮ್ ಯುವಕನೊಬ್ಬನ ಹೆಸರನ್ನು ಬಳಸಿ ಹುಡುಗಿಯರಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿದ್ದ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಹಾಗೂ ಕೇಂದ್ರ ಉಪವಿಭಾಗದ ಎಸಿಪಿ ಉದಯ್ ನಾಯಕ್ ಮಾರ್ಗದರ್ಶನದಲ್ಲಿ ಬಂದರ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಪೊಲೀಸ್ ನಿರೀಕ್ಷಕ ಶಾಂತಾರಾಮ್ ಕುಂದರ್ ಮತ್ತು ಅಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. 

ಆರೋಪಿ ವಿರುದ್ಧ 153-ಎ (ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ), 505 (ಸಾರ್ವಜನಿಕವಾಗಿ ಕಿಡಿಗೇಡಿತನದ ಹೇಳಿಕೆ ನೀಡುವಂತಹ) ಐಪಿಸಿ ಸೆಕ್ಷನ್‌ನಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಕುರಿತು ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News