ಹನೂರು: 2018-19 ಸಾಲಿನ ಪ್ರಥಮ ಹಂತದ ಗ್ರಾಮ ಸಭೆ
ಹನೂರು,ಜು.16: ಪಂಚಾಯತ್ ಅಧಿಕಾರಿಗಳ ಜೊತೆ ಗ್ರಾಮಸ್ಥರು ಕೈ ಜೊಡಿಸಿದರೆ ಮಾತ್ರ ಗ್ರಾಮೀಣ ಭಾಗದಲ್ಲಿ ಬಯಲು ಶೌಚಾಲಯವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಕಣ್ಣೂರು ಗ್ರಾಮದ ನೂತನ ಪಿಡಿಒ ಎಸ್ ನಾರಯಣಚಾರಿ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಕಣ್ಣೂರು ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2018-19 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಕೇಂದ್ರ ಸರ್ಕಾರದ್ದಾಗಿದ್ದು, ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದರು.
ನಿರ್ಮಲ ಭಾರತ ಅಭಿಯಾನದಡಿಯಲ್ಲಿ ಶೌಚಾಲಯ ನಿರ್ಮಿಸಲು ಪ್ರತಿಯೊಂದು ಗ್ರಾಮದಲ್ಲೂ ಸಹ ಅಭಿಯಾನಗಳನ್ನು ಕೈಗೊಂಡು ಅನಂತರ ಶೌಚಾಲಯ ನಿರ್ಮಿಸಲಾಗಿದೆ. ಆದರೂ ಸಹ ಕೆಲವರು ಕಟ್ಟಿಸಿದ ಶೌಚಾಲಯದಲ್ಲಿ ದಿನ ಬಳಕೆಯ ಸಾಮಾಗ್ರಿಗಳನ್ನು ಶೇಖರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಆದ್ದರಿಂದ ಶೌಚಾಲಯ ನಿರ್ಮಿಸಲು ಮಾಡಿದ ಆಂದೋಲನದ ಮಾದರಿಯಲ್ಲಿ ಶೌಚಾಲಯದ ಬಳಕೆಯ ಕುರಿತು ಅರಿವು ಮೂಡಿಸಲು ಗ್ರಾಮಸ್ಥರು, ಸಂಘ ಸಂಸ್ಥೆಯವರು ನಮ್ಮ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಜೊತೆ ಕೈಜೊಡಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾಗಮ್ಮ, ಮಹೇಶ್, ನೂಡಲ್ ಅಧಿಕಾರಿ ಶಿವರಾಜ್, ರೇಷ್ಮೆ ಇಲಾಖೆ ಅಧಿಕಾರಿ ಪುಟ್ಟಸ್ವಾಮಿ, ತಾಲೂಕು ಸಂಯೋಜಕ ಮನೋಹರ್ ಪಿಡಿಒ ವೈರಮಾಣಿಕಮ್ ಗ್ರಾಪಂ ಸದಸ್ಯರು, ಕಚೇರಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.