×
Ad

ಮಂಗಳೂರಿನ 5ನೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Update: 2018-07-17 14:21 IST

ಮಂಗಳೂರು, ಜು.17: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ, ಮಂಗಳೂರಿನ 5ನೆ ಇಂದಿರಾ ಕ್ಯಾಂಟೀನನ್ನು ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು.

ಪಂಪ್ ವೆಲ್ ನ ಮಹಾವೀರ ವ್ರತ್ತದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ  ಕ್ಯಾಂಟೀನ್ ನಿರ್ಮಾಣಗೊಂಡಿದೆ. 

5 ಕ್ಯಾಂಟೀನ್ ಗಳ ಗುರಿ ಪೂರ್ಣ

ಮಂಗಳೂರಿಗೆ 5 ಕ್ಯಾಂಟೀನ್ ಗಳ ಗುರಿಯನ್ನು ರಾಜ್ಯ ಸರಕಾರ ನೀಡಿದ್ದು, ಅದನ್ನು ಪೂರ್ಣಗೊಳಿಸಲಾಗಿದೆ. ಅಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ನೀಡಿದರು‌ ಇದೀಗ ಸಿದ್ದರಾಮಯ್ಯ ನೇತ್ರತ್ವದಲ್ಲಿ ಸಿದ್ಧ ಆಹಾರ ನೀಡುವ ಕೆಲಸ ಆಗಿದೆ. ರಾಜ್ಯದಲ್ಲಿ ಇನ್ನೂ 78 ಕ್ಯಾಂಟೀನ್ ಆರಂಭಕ್ಕೆ ಮುಖ್ಯಮಂತ್ರಿ ಕುಮಾರ ಸ್ವಾಮಿ ನೇತ್ರತ್ವದಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವ ಖಾದರ್ ಹೇಳಿದರು.

ಕ್ಯಾಂಟೀನ್ ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿಯ ಭೋಜನ ಜನರಿಗೆ ಸಬ್ಸಿಡಿ ದರದಲ್ಲಿ ದೊರೆಯಲಿದೆ. ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ವಾರ್ಷಿಕ 2.25 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News