ಮೂಡುಬಿದಿರೆ: ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ
Update: 2018-07-17 20:50 IST
ಮೂಡುಬಿದಿರೆ, ಜು. 17: ಬೆಳುವಾಯಿ ಮಠದ ಕೆರೆ ಬಳಿ ಮಂಗಳವಾರ ಮಧ್ಯಾಹ್ನದ ವೇಳೆ ಖಾಸಗಿ ಬಸ್ಸುಗಳೆರಡು ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಪ್ರಯಾಣಿಕರು ಗಾಯಗೊಂಡು ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಡುಬಿದಿರೆಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಬಸ್ ಹಾಗೂ ಕಾರ್ಕಳದಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಬಸ್ ಬೆಳುವಾಯಿ ಸಮೀಪದ ಮಠದ ಕೆರೆ ಎಂಬಲ್ಲಿ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಸುಮಾರು 10 ಪ್ರಯಾಣಿಕರು ಹಾಗೂ ಎರಡೂ ಬಸ್ಸಿನ ಚಾಲಕರು ಗಾಯಗೊಂಡು ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡೂ ಬಸ್‌ಗಳ ಮುಂಭಾಗದ ಗಾಜು ಪುಡಿಯಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.