×
Ad

ಮೈಸೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-07-17 21:01 IST

ಮೈಸೂರು,ಜು.17: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಿನ್ನ ಬೆಳ್ಳಿ ವ್ಯಾಪಾರಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿವಿ ಮೊಹಲ್ಲಾದಲ್ಲಿ ನಡೆದಿದೆ.

ಮೃತರನ್ನು ಸಂಕಲ್ಪ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದ ಓಂಪ್ರಕಾಶ್(35) ಎಂದು ಗುರುತಿಸಲಾಗಿದ್ದು, ಇವರು ತನ್ನ ನಿವಾಸದಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಮನೆಯವರೆಲ್ಲ ಹೊರಗಡೆ ಹೋದಾಗ ನೇಣಿಗೆ ಶರಣಾಗಿದ್ದು, ಮನೆಯವರು ಮರಳಿದ ನಂತರ ಬಾಗಿಲು ಬಡಿದರೂ, ಬೆಲ್ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ದೂರವಾಣಿ ಕರೆಯನ್ನು ಕೂಡ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡು ಬಾಗಿಲು ಒಡೆದು ಒಳಕ್ಕೆ ಹೋಗಿ ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದು ಬಂದಿದೆ.

ವಿವಿಪುರಂ ಠಾಣೆಯ ಇನ್ಸಪೆಕ್ಟರ್ ಸೂರಜ್, ಸಿಬ್ಬಂದಿಗಳಾದ ಶ್ರೀನಿವಾಸ, ಮಧು ಮತ್ತಿತರರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News