ಕುಮಾರಸ್ವಾಮಿ ಯಾವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದಾರೆ ಗೊತ್ತಿಲ್ಲ: ಈಶ್ವರ್ ಖಂಡ್ರೆ
Update: 2018-07-17 22:22 IST
ಮೈಸೂರು,ಜು.17: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯಾವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದಾರೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಅದು ಯಾವ ಸಂದರ್ಭ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವರ ಕಣ್ಣೀರ ಕುರಿತು ಅವರ ಬಳಿಯೇ ಕೇಳಬೇಕು. ಅದಕ್ಕೆ ನಾನು ಉತ್ತರ ಕೊಡೋದಿಲ್ಲ ಎಂದು ಹೇಳಿದರು.
ಪಾತಕಿ ಸೈಕಲ್ ರವಿ ಜೊತೆ ಮಾಜಿ ಸಚಿವ ಎಂ.ಬಿ.ಪಾಟೀಲ್‍ಗೆ ನಂಟು ವಿಚಾರಕ್ಕೆ ಪ್ರತಿಕ್ರಿಯಿಸಿ ಯಾವುದೇ ಊಹಾಪೋಹಕ್ಕೆ ನಾನು ಉತ್ತರ ಕೊಡುವುದಿಲ್ಲ ಎಂದು ತಿಳಿಸಿದರು.