×
Ad

ಮುಡಿಪು ಕಾಲೇಜಿನ ಅಭಿವೃದ್ಧಿಗೆ ಸರ್ವ ಪ್ರಯತ್ನ: ಯು.ಟಿ.ಖಾದರ್

Update: 2018-07-17 23:11 IST

ಕೊಣಾಜೆ, ಜು. 17: ಶಾಲಾ ಆಡಳಿತ ಮಂಡಳಿ ಬೆಂಗಳೂರಿಗೆ ಬಂದು ಭೇಟಿ ನೀಡಿ ಇಲ್ಲಿಯ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ ಬೇಡಿಕೆಯಿಟ್ಟಾಗ, ಸಂಬಂಧಪಟ್ಟ ಇಲಾಖೆಗಳಲ್ಲಿ ಮಾತುಕತೆ ನಡೆಸಿ ಕಟ್ಟಡದ ಅಭಿವೃದ್ಧಿಗೆ 2 ಕೋಟಿ ಅನುದಾನ ಈಗಾಗಲೇ ದೊರಕಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಸವಲತ್ತುಗಳನ್ನು ಒದಗಿಸುವ ಉದ್ದೇಶದಿಂದ ಸುಸಜ್ಜಿತ ಪ್ರಯೋಗಾಲಯ ರಚನೆಗೂ ಮಂಜೂರಾತಿ ದೊರೆತಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಹೇಳಿದರು.

ಅವರು ಕುರ್ನಾಡು ಗ್ರಾಮದ ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಕಾರಾತ್ಮಕ ಆಲೋಚನೆಗಳನ್ನು ಮೈಗೂಡಿಸಿಕೊಂಡು ಸಮಸ್ಯೆಗಳನ್ನು ಬಗೆಹರಿಸುವಂತಹ ಮನೋಭಾವವನ್ನು ಬೆಳೆಸಿಕೊಳ್ಳಬೇಕಿದೆ. ಮಕ್ಕಳು ತಾವು ಆಡುವ ಮಾತು ಮತ್ತು ಮಾಡುವ ಕೆಲಸ ಸಮಾಜಕ್ಕೆ ಮತ್ತು ದೇಶಕ್ಕೆ ಪೂರಕವಾಗಿರಬೇಕು. ಈ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್‌ರವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ  ಮುಡಿಪು ಪದವಿ ಕಾಲೇಜಿಗೆ ಸರಕಾರ ಮಂಜೂರುಗೊಳಿಸಿದ ರೂ. 2 ಕೋಟಿ ಅನುದಾನ ಮಂಜೂರಾತಿಯ ಆದೇಶ ಪತ್ರವನ್ನು ಸಚಿವರು ಕಾಲೇಜು ಪ್ರಾಧ್ಯಾಪಕರಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಯಾಗಿ ಕುರ್ನಾಡು ಜಿ.ಪಂ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ, ತಾ.ಪಂ ಸದಸ್ಯ ನವೀನ್ ಪಾದಲ್ಪಾಡಿ, ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕುರ್ನಾಡು ಗ್ರಾ.ಪಂ ಅಧ್ಯಕ್ಷ ಶೈಲಜಾ.ಎಂ, ಸರಕಾರಿ ಪ್ರಥಮ ದರ್ಜೆ ಕಾಲೇಜು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ, ಫ್ರೌಡ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮರ್ ಪಜೀರ್, ಇರಾ ಗ್ರಾ,ಪಂ ಅಧ್ಯಕ್ಷ ಅಬ್ದುಲ್ ರಝಾಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಕೆ.ಶಂಕರ್ ಭಟ್, ಮೂಸ ಕುಂಞ ಸಂಬರತೋಟ, ಅಬ್ದುಲ್ ಜಲೀಲ್ ಮೊಂಟುಗೋಳಿ, ಸೂಫಿ ಕುಂಞ, ಅಂದು ಕುಂಞ, ಪ್ರೌಡಶಾಲಾ ಉಪ ಪ್ರಾಂಶುಪಾಲ ಬಸವರಾಜು ಪಲ್ಲಕ್ಕಿ, ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಅಸ್ಫಾಕ್ ಅಹ್ಮದ್ ಎ. ಮ್ಯಾಗೇರಿ, ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಗಿರಿಧರ್ ರಾವ್ ಉಪಸ್ಥಿತರಿದರು.

ಉಪನ್ಯಾಸಕಿ ಶರಣ್ಯ ರೈ ಸ್ವಾಗತಿಸಿದರು. ಉಮೇಶ್ ಕೆ.ಆರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News