ಸ್ವಾಮಿ ಅಗ್ನಿವೇಶ್‌ಗೆ ಬಿಜೆಪಿ ಕಾರ್ಯಕರ್ತರಿಂದ ಥಳಿತ
Update: 2018-07-17 23:46 IST
ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಮಂಗಳವಾರ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರ ಗುಂಪೊಂದು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್(80) ಮೇಲೆ ಹಲ್ಲೆ ನಡೆಸಿ, ಥಳಿಸಿದೆ. ಅಗ್ನಿವೇಶ್ ಅವರು ಮಾತುಕತೆಗೆ ಮುಂದಾಗಿದ್ದರೂ ಗುಂಪು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿತು. ಈ ಘಟನೆಯ ಬಗ್ಗೆ ವಿವರವಾದ ತನಿಖೆಯನ್ನು ನಡೆಸುವಂತೆ ಮುಖ್ಯಮಂತ್ರಿ ರಘುವರದಾಸ ಅವರು ಪೊಲೀಸರಿಗೆ ಆದೇಶಿಸಿದ್ದಾರೆ.