ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್‌ಗಳಿಗೆ ಟೀಮ್ ಇಂಡಿಯಾ ಪ್ರಕಟ

Update: 2018-07-18 12:08 GMT

ಹೊಸದಿಲ್ಲಿ, ಜು.18: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರು ಟೆಸ್ಟ್‌ಗಳಿಗೆ ಭಾರತದ ಟೆಸ್ಟ್ ಕ್ರಿಕೆಟ್ ತಂಡ ಪ್ರಕಟಗೊಂಡಿದ್ದು, ದಿಲ್ಲಿಯ ಭರವಸೆಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ತಂಡದಲ್ಲಿ ಮೊದಲ ಬಾರಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
 ಬುಧವಾರ ಲೀಡ್ಸ್‌ನಲ್ಲಿ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಐಸಿಸಿ) ಆಯ್ಕೆ ಸಮಿತಿ ಸಭೆಯಲ್ಲಿ 18 ಮಂದಿ ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ.
ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಟೆಸ್ಟ್ ತಂಡಕ್ಕೆ ಅಜಿಂಕ್ಯ ರಹಾನೆ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಗಾಯಗೊಂಡಿರುವ ಭುವನೇಶ್ವರ ಕುಮಾರ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ.
  ಗಾಯದಿಂದ ಚೇತರಿಸಿಕೊಳ್ಳುತ್ತಿರುವ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾರನ್ನು ತಂಡಕ್ಕೆ ಸೇರಿಸಿಕೊಂಡಿದ್ದರೂ , ಅವರು ಮೊದಲ ಟೆಸ್ಟ್‌ಗೆ ಲಭ್ಯರಿಲ್ಲ. ಎರಡನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಗೌರವ ಕಾರ್ಯದರ್ಶಿ ಅಮಿತಾಭ್ ಚೌಧರಿ ಮಾಹಿತಿ ನೀಡಿದ್ದಾರೆ.

ಚೈನಾಮೆನ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ತಂಡದಲ್ಲಿರುವ ಮೂರನೇ ಸ್ಪಿನ್ನರ್. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜ ತಂಡದಲ್ಲಿರುವ ಇಬ್ಬರು ಪ್ರಮುಖ ಸ್ಪಿನ್ನರ್‌ಗಳು. ವೇಗದ ಬೌಲಿಂಗ್ ವಿಭಾಗವನ್ನು ಇಶಾಂತ್ ಶರ್ಮ, ಮುಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಮುನ್ನಡೆಸಲಿದ್ದಾರೆ.
ಟೆಸ್ಟ್ ತಜ್ಞರಾಗಿರುವ ಚೇತೇಶ್ವರ್ ಪೂಜಾರ ಮತ್ತು ಮುರಳಿ ವಿಜಯ್ ಅವರು ಕರಣ್ ನಾಯರ್ ಜೊತೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ.
ಇದೇ ವೇಳೆ ಬೆಳಗಾಂನಲ್ಲಿ ಜುಲೈ 30ರಿಂದ ದಕ್ಷಿಣ ಆಫ್ರಿಕ ‘ಎ’ ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯಕ್ಕೆ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡವನ್ನು ಪ್ರಕಟಿಸಲಾಗಿದೆ.
ಭಾರತದ ಟೆಸ್ಟ್ ತಂಡ(ಮೂರು ಟೆಸ್ಟ್‌ಗಳಿಗೆ): ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ಕರುಣ್ ನಾಯರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ರಿಷಭ್ ಪಂತ್(ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲ್‌ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮ, ಮುಹಮ್ಮದ್ ಶಮಿ, ಉಮೇಶ್ ಯಾದವ್, ಜಸ್‌ಪ್ರೀತ್ ಬುಮ್ರಾ, ಶಾರ್ದುಲ್ ಠಾಕೂರ್.
ಮಂಡಳಿ ಅಧ್ಯಕ್ಷರ ಇಲೆವೆನ್ ತಂಡ: ಇಶಾನ್ ಕಿಶನ್(ನಾಯಕ/ವಿಕೆಟ್ ಕೀಪರ್), ಆರ್.ಆರ್. ಸಂಜಯ್, ಎ.ಆರ್.ಈಶ್ವರನ್, ಧ್ರುವ್ ಶೊರೈ, ಅನ್ಮೊಲ್‌ಪ್ರೀತ್ ಸಿಂಗ್, ರಿಕಿ ಭುಯ್, ಜಲಜ್ ಸೆಕ್ಸೇನಾ, ಸಿದ್ದೇಶ್ ಲಾಡ್, ಮಿಹಿರ್ ಹಿರ್ವಾನಿ, ಡಿ.ಎ.ಜಡೇಜ, ಆವೇಶ್ ಖಾನ್, ಶಿವಮ್ ಮಾವಿ, ಇಶಾನ್ ಪೊರೆಲ್, ಅತಿಥ್ ಸೇಠ್.
,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News