ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆ ಬಂಧನ

Update: 2018-07-18 13:22 GMT

ಬೆಂಗಳೂರು, ಜು.18: ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದಡಿ ವಿದೇಶಿ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೈಝೀರಿಯಾ ದೇಶದ ಜಾನ್ ನಾನ್‌ಸೋ(32) ಬಂಧಿತ ಆರೋಪಿಯಾಗಿದ್ದು, ಈತ ನಗರದ ಕನಕನಗರದಲ್ಲಿ ವಾಸವಾಗಿದ್ದ ಎಂದು ಸಿಸಿಬಿ ತಿಳಿಸಿದೆ. ಟಿ.ಸಿ.ಪಾಳ್ಯ ಮುಖ್ಯರಸ್ತೆಯ ಆನೆಯಪ್ಪ ವೃತ್ತದ ಬಳಿ ಮಾದಕ ವಸ್ತು ಕೊಕೇನ್ ಅನ್ನು ತನ್ನ ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಮುಂದಾಗಿರುವ ಸಂಬಂಧ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಶದಲ್ಲಿದ್ದ 40 ಗ್ರಾಂ ತೂಕದ ಕೊಕೇನ್, ಕೃತ್ಯಕ್ಕೆ ಬಳಸುತ್ತಿದ್ದ 2 ಮೊಬೈಲ್, ಬೈಕ್, 23 ಸಾವಿರ ನಗದು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News