ದಿಲ್ಲಿಯಲ್ಲಿ ಅನಧಿಕೃತ ನಿರ್ಮಾಣಗಳ ವಿರುದ್ಧ ಅಭಿಯಾನ ನಿಲ್ಲದು: ಸುಪ್ರೀಂ
Update: 2018-07-18 20:51 IST
ಹೊಸದಿಲ್ಲಿ,ಜು.18: ದಿಲ್ಲಿಯಲ್ಲಿ ಅನಧಿಕೃತ ನಿರ್ಮಾಣಗಳ ಸ್ಥಗಿತ ಅಥವಾ ನೆಲಸಮವನ್ನು ನಿಲ್ಲಿಸುವ ಪ್ರಶ್ನೆೆಯೇ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಬುಧವಾರ ಸ್ಪಷ್ಟಪಡಿಸಿತು.
ಅಕ್ರಮ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ತಾನು ದಿಲ್ಲಿಯಲ್ಲಿನ ಅಧಿಕಾರಗಳಿಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಕೇಂದ್ರ ಸರಕಾರವು ತಿಳಿಸಿದ ಬಳಿಕ ನ್ಯಾಯಮೂರ್ತಿಗಳಾದ ಎಂ.ಬಿ.ಲೋಕೂರ್ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಡ ಪೀಠವು ಈ ನಿರ್ದೇಶವನ್ನು ಹೊರಡಿಸಿತು. ಯಾವುದೇ ಅನಧಿಕೃತ ನಿರ್ಮಾಣವು ಅಧಿಕಾರಿಗಳ ಗಮನಕ್ಕೆ ಬಂದರೆ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆಯೂ ಅದು ತಾಕೀತು ಮಾಡಿತು. ಅಧಿಕಾರಿಗಳ ಕಾರ್ಯಾಚರಣೆಗೆ ಸಾಕಷ್ಟು ಪೊಲೀಸ್ ರಕ್ಷಣೆಯನ್ನು ಒದಗಿಸುವಂತೆಯೂ ನ್ಯಾಯಾಲಯವು ಆದೇಶಿಸಿತು.