ಮಂಗಳೂರು: ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಎನ್‌ಎಸ್‌ಯುಐ ಧರಣಿ
ಮಂಗಳೂರು, ಜು.18: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ಹಣಕಾಸಿನ ಕಾರಣ ನೀಡಿ ಉಚಿತ ಬಸ್‌ಪಾಸ್ ನೀಡುವುದನ್ನು ರದ್ದು ಮಾಡಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಉಚಿತ ಬಸ್‌ಪಾಸ್ ನೀಡಲು ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಸಮಿತಿ ನಗರದಲ್ಲಿ ಧರಣಿ ನಡೆಸಿತು.
ಕಳೆದ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಂಡಿಸಿದ್ದ ಬಜೆಟ್‌ನಲ್ಲಿ ಆರ್ಥಿಕ, ಸಾಮಾಜಿಕ, ಹಿಂದುಳಿದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಉಚಿತ ಬಸ್‌ಪಾಸ್ ಯೋಜನೆಯನ್ನ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವಂತಹ ಯೋಜನೆ ಮಂಡಿಸಿದ್ದರು. ಈದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ಈ ಯೋಜನೆಯನ್ನು ಹಣಕಾಸಿನ ಕಾರಣ ನೀಡಿ ರದ್ದು ಮಾಡಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾಥಿಗಳಿಗೆ ತೊಂದರೆಯಾಗಿದೆ ಎಂದು ದೂರಿದೆ.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಅಬ್ದುಲಾ ಬಿನ್ನೂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮಾನ್ ಆವ್‌ಫ್, ಸವಾದ್ ಸುಳ್ಯ, ಶಷಾಂಕ್ ಪೂಜಾರಿ, ಪ್ರಶಾಂತ್‌ಕುಮಾರ್, ಫಾರೂಕ್, ಜೀವನ್ ಲೋಬೊ ಮತ್ತಿತರರು ಪಾಲ್ಗೊಂಡಿದ್ದರು.