ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಕೇವಲ ಶೇ. 15 ಮೀಸಲಾತಿ

Update: 2018-07-18 16:21 GMT

ಹೊಸದಿಲ್ಲಿ, ಜು. 18: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ನೂತನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪಟ್ಟಿಯಲ್ಲಿರುವ 51 ಸದಸ್ಯರಲ್ಲಿ ಕೇವಲ 7 ಮಂದಿ ಮಾತ್ರ ಮಹಿಳೆಯರು.

ಸಂಸತ್ ಸದಸ್ಯರಾದ ಅಂಬಿಕಾ ಸೋನಿ ಹಾಗೂ ಕುಮಾರಿ ಸೆಲ್ಜಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ರಜನಿ ಪಾಟೀಲ್, ಆಶಾ ಕುಮಾರಿ ಖಾಯಂ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಅಡಿಯಲ್ಲಿ ಶಾಸಕಾಂಗದಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಧ್ವನಿ ಎತ್ತುತ್ತಿರುವ ಹೊರತಾಗಿಯೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಕೇವಲ ಶೇ. 7 ಮಹಿಳೆಯರು ಮಾತ್ರ ಸ್ಥಾನ ಪಡೆದುಕೊಂಡಿದ್ದಾರೆ.

ನೂತನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು 51 ಸದಸ್ಯರಿದ್ದಾರೆ. ಮೊದಲ ಬಾರಿಗೆ ರಾಜ್ಯದ ಉಸ್ತುವಾರಿಯನ್ನು ಖಾಯಂ ಆಹ್ವಾನಿತರ ಪಟ್ಟಿಗೆ ಸೇರಿಸಲಾಗಿದೆ. ನೂತನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಿರಿಯ ನಾಯಕರಾದ ದಿಗ್ವಿಜಯ ಸಿಂಗ್, ಕಮಲ್ ನಾಥ್, ಸುಶೀಲ್ ಕುಮಾರ್ ಶಿಂದೆ, ಮೋಹನ್ ಪ್ರಕಾಸ್, ಸಿ.ಪಿ. ಜೋಶಿ ಹಾಗೂ ಶಶಿ ತರೂರ್ ಒಳಗೊಂಡಿಲ್ಲ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ 23 ಸದಸ್ಯರು, 19 ಖಾಯಂ ಆಹ್ವಾನಿತರು ಹಾಗೂ 9 ವಿಶೇಷ ಆಹ್ವಾನಿತರನ್ನು ಒಳಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News