ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆ
Update: 2018-07-18 22:30 IST
ಚೆನ್ನೈ, ಜು.18: ವಂಸಂ ಎಂಬ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದ ನಟಿ ಪ್ರಿಯಾಂಕ ಅವರ ಮೃತದೇಹವು ಚೆನ್ನೈಯ ವಲಸರವಕ್ಕಮ್‌ನಲ್ಲಿರುವ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟಿಯ ಆತ್ಮಹತ್ಯೆಗೆ ನಿಖರ ಕಾರಣ ಸ್ಪಷ್ಟವಾಗಿಲ್ಲವಾದರೂ ಕೌಟುಂಬಿಕ ಕಲಹದಿಂದಾಗಿ ಆಕೆ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಿಯಾಂಕ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು ಅವರಿಗೆ ಮಕ್ಕಳಾಗಿರಲಿಲ್ಲ. ಇದರಿಂದ ಪತಿ-ಪತ್ನಿಯ ಮಧ್ಯೆ ಆಗಾಗ ಕಲಹ ಉಂಟಾಗುತ್ತಿತ್ತು. ಇದರಿಂದ ಕುಟುಂಬದಲ್ಲಿ ನೆಮ್ಮದಿ ಇರಲಿಲ್ಲ ಎಂದು ತನಿಖೆಯ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಟಿಯ ಸಾವಿಗೆ ವಂಸಂ ತಂಡ ತೀವ್ರ ಆಘಾತ ವ್ಯಕ್ತಪಡಿಸಿದೆ.