ಶಿರೂರು ಶ್ರೀಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
Update: 2018-07-18 22:43 IST
ಉಡುಪಿ, ಜು.18: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಬುಧವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವಿಪರೀತ ವಾಂತಿ ಮಾಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸ್ವಾಮೀಜಿ ಸೇವಿಸಿದ ಆಹಾರದಲ್ಲಿನ ವ್ಯತ್ಯಾಸದಿಂದ ಈ ರೀತಿ ಅನಾರೋಗ್ಯ ಉಂಟಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆನ್ನಲಾಗಿದೆ. ಸದ್ಯ ಸ್ವಾಮೀಜಿಯ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.