ಚಿಕ್ಕಮಗಳೂರು: ಉಚಿತ ಬಸ್‍ಪಾಸ್‍ಗೆ ಒತ್ತಾಯಿಸಿ ಎಬಿವಿಪಿ ಧರಣಿ

Update: 2018-07-18 17:49 GMT

ಚಿಕ್ಕಮಗಳೂರು, ಜು..18: ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವಲ್ಲಿ ಸಮ್ಮಿಶ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಧರಣಿ ನಡೆಸಲಾಯಿತು.

ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರಕಾರ ತನ್ನ ಬಜೆಟ್‍ನಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದನ್ನು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರಕರ ಜಾರಿಗೊಳಿಸದೆ ವಿದ್ಯಾಥಿಗಳಿಗೆ ಅನ್ಯಾಯ ಮಾಡಿದೆ. ರಾಜ್ಯ ಸಾರಿಗೆ ಸಚಿವರು ಉಚಿತ ಬಸ್‍ಪಾಸ್ ನೀಡುವುದಿಲ್ಲ ಎಂಬ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಬಸ್‍ಪಾಸ್ ನೀಡುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗುವುದಿಲ್ಲ, ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವಂತೆ ಧರಣಿ ನಿರತರು ಸರಕಾವನ್ನು ಒತ್ತಾಯಿಸಿದರು.

ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಧರಣಿಯಲ್ಲಿ ಅಖಿತ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಶಶಿ ಆಲ್ದೂರು, ನಗರ ಕಾರ್ಯದರ್ಶಿ ಸೂರ್ಯ, ಹರ್ಷಿತಾ, ಪವನ್, ಅಕ್ಷಯ್, ಮೋಹನ್, ಶ್ರೀಮಂತ್, ಉಮೇಶ್, ಶಶಾಂಕ್, ಸಂದೀಪ್ ದೀಪಿಕಾ ಮತ್ತಿತರರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News