ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಾಯಿ-ಮಗಳು ಮೃತ್ಯು

Update: 2018-07-19 03:53 GMT

ಉಡುಪಿ, ಜು.19: ಮನೆಯಂಗಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ತಾಯಿ-ಮಗಳು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪೆರ್ಣಂಕಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡುಪಾದೆ ಎಂಬಲ್ಲಿ ಇಂದು ಬೆಳಗ್ಗೆ 6:30ರ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಗುಂಡುಪಾದೆಯ ನಿವಾಸಿಗಳಾದ ಜಲಜಾ ನಾಯಕ್(80) ಹಾಗೂ ಅವರ ಮಗಳು ಸುಮತಿ(55) ಎಂದು ಗುರುತಿಸಲಾಗಿದೆ.

ರಾತ್ರಿ ಸುರಿದ ಭಾರೀ ಗಾಳಿಮಳೆ ಕಾರಣ ವಿದ್ಯುತ್ ತಂತಿ ತುಂಡಾಗಿ ಮನೆಯಂಗಳದಲ್ಲಿ ಬಿದ್ದಿತ್ತು. ಆದರೆ ವಿದ್ಯುತ್ ಸಂಪರ್ಕ ಮೊಟಕುಗೊಂಡಿರಲಿಲ್ಲ. ತುಂಡಾಗಿರುವ ಬಿದ್ದಿರುವ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಗಮನಿಸದೆ ಅಂಗಳಕ್ಕಿಳಿದ ಜಲಜಾ ಮತ್ತು ಸುಮತಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವೇಳೆ ಇವರಿಬ್ಬರೇ ಮನೆಯಲ್ಲಿ ಇದ್ದರೆನ್ನಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News