ಅಗತ್ಯಬಿದ್ದರೆ ತನಿಖೆ ನಡೆಸಲು ಸಿದ್ಧ: ಉಪಮುಖ್ಯಮಂತ್ರಿ ಪರಮೇಶ್ವರ್
Update: 2018-07-19 16:54 IST
ಬೆಂಗಳೂರು, ಜು.19: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಸಾವಿನ ಬಗ್ಗೆ ಅಗತ್ಯಬಿದ್ದರೆ ತನಿಖೆ ನಡೆಸಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ವಿಷಪ್ರಾಶನ ಆಗಿದೆ ಎಂದೂ ಕೆಲವರು ಹೇಳುತ್ತಿದ್ದಾರೆ. ಈ ಬಗ್ಗೆ ಅಗತ್ಯ ಬಿದ್ದರೆ ಖಂಡಿತ ತನಿಖೆ ಮಾಡಲಾಗುವುದು ಎಂದವರು ಹೇಳಿದ್ದಾರೆ.