ಮೈಸೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

Update: 2018-07-19 15:19 GMT

ಮೈಸೂರು,ಜು.19: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಆಲನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪ್ರವೀಣ್ ಪೂಜಾರಿ, ಗಿರೀಶ್ ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಗಾಂಜಾ ಖರೀದಿಸಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 700 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News