ಅಂಗನವಾಡಿಯ 2 ಲಕ್ಷ ಸಿಬ್ಬಂದಿ ಹುದ್ದೆ ಖಾಲಿ

Update: 2018-07-19 18:43 GMT

ಹೊಸದಿಲ್ಲಿ, ಜು. 19: ದೇಶಾದ್ಯಂತ ಅಂಗನವಾಡಿಯ 2 ಲಕ್ಷಕ್ಕೂ ಅಧಿಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಬಿಹಾರ ರಾಜ್ಯವೊಂದರಲ್ಲೇ 53 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯ ಸಭೆಗೆ ಮಾಹಿತಿ ನೀಡಲಾಯಿತು.

ತಿಂಗಳಿಗೆ ಅಂಗನವಾಡಿ ಕಾರ್ಯಕರ್ತರಿಗೆ 3 ಸಾವಿರ ರೂ, ಮಿನಿ ಅಂಗನವಾಡಿ ಕಾರ್ಯಕರ್ತರಿಗೆ 2,250 ರೂ. ಹಾಗೂ ಅಂಗನವಾಡಿ ಸಹಾಯಕರಿಗೆ 1,500 ರೂ. ನೀಡಲಾಗುತ್ತದೆ ಎಂದು ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಖಾತೆಯ ಸಹಾಯಕ ಸಚಿವ ವಿರೇಂದ್ರ ಕುಮಾರ್ ರಾಜ್ಯಸಭೆಗೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತರು ಹೆಚ್ಚುವರಿ ಜವಾಬ್ದಾರಿ ವಹಿಸಲಾಗುತ್ತಿದೆ. ಅದಕ್ಕೆ ಅವರಿಗೆ ಗೌರವ ಧನ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ನೀಡಲಾಗುವ ಹೆಚ್ಚುವರಿ ಕೆಲಸಗಳಿಗೆ ಹೆಚ್ಚುವರಿ ಗೌರವ ಧನ ನೀಡಲಾಗುತ್ತದೆ ಎಂದರು. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದ ಸಮಿತಿಗಳು ಸಮಯಕ್ಕೆ ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತರು ಹಾಗೂ ಅಂಗನವಾಡಿ ಸಹಾಯಕರನ್ನು ನೇಮಕ ಮಾಡುತ್ತದೆ ಎಂದು ಕುಮಾರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News