ಕಾರು ಡಿವೈಡರ್‌ಗೆ ಢಿಕ್ಕಿ: ಆರ್‌ಟಿಓ ಇನ್‌ಸ್ಪೆಕ್ಟರ್ ಮೃತ್ಯು

Update: 2018-07-20 04:46 GMT

ತುಮಕೂರು, ಜು.20: ಕಾರೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಆರ್‌ಟಿಒ ಇನ್‌ಸ್ಪೆಕ್ಟರ್‌ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ತಾವರೆಕೆರೆ ಬಳಿ ಇಂದು ಮುಂಜಾನೆ ನಡೆದಿದೆ.

ಮೃತರನ್ನು ಚಿತ್ರದುರ್ಗದ ಆರ್‌ಟಿಒ ಇನ್‌ಸ್ಪೆಕ್ಟರ್ ದೇವರಾಜು(50) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಶಿರಾಗೆ ಆಗಮಿಸಿದ್ದ ಅವರು ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಕಾರು ಚಾಲಕ ಅಶೋಕನಿಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News