ಶಿರೂರು ಸ್ವಾಮೀಜಿ ಸಾವಿನ ಪ್ರಕರಣದ ಪೊಲೀಸ್ ತನಿಖೆಯಾಧರಿಸಿ ಕ್ರಮ: ಡಿಸಿಎಂ

Update: 2018-07-20 10:28 GMT

ಬೆಂಗಳೂರು, ಜು.20: ಉಡುಪಿಯ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಸಹೋದರ ಪೊಲೀಸ್ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ. ತನಿಖೆಯ ಮಾಹಿತಿಯ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಹುಟ್ಟುಹಬ್ಬದ ಅಂಗವಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಬಿವಿಎಂಪಿಯಲ್ಲಿ ಹಗರಣ ನಡೆದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ದಿಷ್ಟವಾಗಿ ಹಗರಣ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ತಂದರೆ ಕ್ರಮ ತೆಗೆದುಕೊಳ್ಳಲಾಗುವುದು. ಬಿಬಿಎಂಪಿಯಲ್ಲಿ ಕೆಲ ವ್ಯವಸ್ಥೆ ಬದಲು ಮಾಡುವ ಕೆಲಸ ಪ್ರಗತಿಯಲ್ಲಿದೆ. ಅಕೌಂಟೆಬಿಟಿಲಿಟಿ ನಿರ್ವಹಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಗುತ್ತಿಗೆದಾರರು ಅಗತ್ಯಕ್ಕಿಂತ ಹೆಚ್ಚು ಪೌರ ಕಾರ್ಮಿಕರನ್ನು ನೇಮಿಸಿದ್ದರು. ಇದರಿಂದ ವೇತನದ ಗೊಂದಲ ಉಂಟಾಗಿತ್ತು. ಅದಕ್ಕಾಗಿ ಈಗ ಬಯೋಮೆಟ್ರಿಕ್ ವ್ಯವಸ್ಥೆ ತಂದಿದ್ದೇವೆ. ಇದರಿಂದ 18,300 ಪೌರ ಕಾರ್ಮಿಕರು ಮಾತ್ರ ಇರುವುದು ಗಮನಕ್ಕೆ ಬಂದಿದೆ. ಇನ್ನು ನಾಲ್ಕು ಸಾವಿರ ಕಾರ್ಮಿಕರ ನೇಮಕ ಮಾಡಿಕೊಳ್ಳಲು ಅಂದಾಜು ಮಾಡಲಾಗಿದೆ. ಈ ನೇಮಕದ ವೇಳೆ ಗುತ್ತಿಗೆದಾರರಡಿ ಕೆಲಸ ಮಾಡಿದ ಪೌರಕಾರ್ಮಿಕರನ್ನೇ ಹಿರಿತನದ ಆಧಾರದ ಮೇಲೆ ಪರಿಗಣಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News