ಬಿಬಿಎಂಪಿಯಲ್ಲಿ ಹಗರಣ ಕಂಡು ಬಂದರೆ ಸೂಕ್ತಕ್ರಮ: ಡಾ.ಜಿ.ಪರಮೇಶ್ವರ್

Update: 2018-07-20 13:08 GMT

ಬೆಂಗಳೂರು, ಜು.20: ಬಿಬಿಎಂಪಿಯಲ್ಲಿ ಹಗರಣಗಳು ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದರೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರ ಹುಟ್ಟು ಹಬ್ಬದ ಅಂಗವಾಗಿ ‘ಪೊಲಿಟಿಕಲ್ ಅಡ್ವೈಸರ್’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿಯಲ್ಲಿ ಹಗರಣ ನಡೆದಿರುವ ಬಗ್ಗೆ ನಿರ್ದಿಷ್ಟವಾಗಿ ನನ್ನ ಗಮನಕ್ಕೆ ತಂದರೆ ಕ್ರಮ ಕೈಕೊಳ್ಳಲಾಗುವುದು ಎಂದ ಅವರು, ಬಿಬಿಎಂಪಿಯಲ್ಲಿ ಪಾರದರ್ಶಕ ಆಡಳಿತ ನಡೆಯಬೇಕೆಂಬ ನಿಟ್ಟಿನಲ್ಲಿ ಕೆಲ ವ್ಯವಸ್ಥೆ ಬದಲು ಮಾಡುವ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಗುತ್ತಿಗೆದಾರರು ಅಗತ್ಯಕ್ಕಿಂತ ಹೆಚ್ಚು ಪೌರಕಾರ್ಮಿಕರನ್ನು ನೇಮಿಸಿದ್ದರು. ಇದರಿಂದ ವೇತನದ ಗೊಂದಲ ಉಂಟಾಗಿತ್ತು. ಅದಕ್ಕಾಗಿ ಈಗ ಬಯೋಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ. ಈ ವ್ಯವಸ್ಥೆ ಅಳವಡಿಸಿದ ಬಳಿಕ 18,300 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವುದು ತಿಳಿದು ಬಂದಿದೆ. ಇನ್ನುಳಿದಂತೆ 4 ಸಾವಿರ ಕಾರ್ಮಿಕರ ನೇಮಕ ಮಾಡಿಕೊಳ್ಳಲು ಅಂದಾಜು ಮಾಡಲಾಗಿದೆ. ನೇಮಕ ಪ್ರಕ್ರಿಯೆ ಸಮಯದಲ್ಲಿ ಗುತ್ತಿಗೆದಾರರ ಬಳಿ ಕೆಲಸ ಮಾಡಿದ ಪೌರಕಾರ್ಮಿಕರನ್ನೇ ಹಿರಿತನದ ಆಧಾರದ ನೇಮಿಸಲಾಗುವುದು ಎಂದು ಹೇಳಿದರು.

 ಬೇರೆ ಅರ್ಥಕಲ್ಪಿಸಬೇಡಿ
‘ನನ್ನ ಸಹೋದರನಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ನಗರ ಬಿಟ್ಟು ಎಲ್ಲಿಯೂ ಹೋಗುತ್ತಿಲ್ಲ. ಹೀಗಾಗಿ, ಕಾವೇರಿಗೆ ಬಾಗಿನ ಅರ್ಪಿಸಲು ತೆರಳು ಸಾಧ್ಯವಾಗಿಲ್ಲ. ಇದಕ್ಕೆ ಬೇರ ಅರ್ಥ ಕಲ್ಪಿಸುವುದು ಬೇಡ’
-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News