ಬೆಂಗಳೂರು: ಚೂರಿಯಿಂದ ಇರಿದು ಮಹಿಳೆಯ ಹತ್ಯೆಗೈದ ಸಹೋದರ
Update: 2018-07-20 19:15 IST
ಬೆಂಗಳೂರು, ಜು.20: ಹಣಕಾಸಿನ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಮಹಿಳೆಗೆ ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸಾರಾಯಿಪಾಳ್ಯ ನಿವಾಸಿ ಸುಮಯ್ಯಾ (32) ಎಂಬಾಕೆ ಕೊಲೆಯಾಗಿರುವ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.
ಗುರುವಾರ ಬೆಳಗ್ಗೆ ಸಹೋದರ ಅತಾಹುಲ್ಲಾ ಖಾನ್ ಜೊತೆ ಹಣಕಾಸು ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಅತುಹುಲ್ಲಾ ಖಾನ್ ಸಹೋದರಿ ಸುಮಯ್ಯಾ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.