ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್

Update: 2018-07-20 14:47 GMT

ಬೆಂಗಳೂರು, ಜು.20: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಬಂಧ ಈಗಾಗಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಣೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ತಿಳಿಸಿದರು.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಾನಗಳ ಹಂಚಿಕೆ ಹಾಗೂ ಮೈತ್ರಿ ವಿಚಾರವಾಗಿ ಪಕ್ಷದ ಮಟ್ಟದಲ್ಲಿ ಇನ್ನೂ ಚರ್ಚೆಗಳು ಆರಂಭವಾಗಿಲ್ಲ ಎಂದರು.

ಲೋಕಸಭೆ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಸದ್ಯಕ್ಕೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ದಿನೇಶ್‌ ಗುಂಡೂರಾವ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News