ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2018-07-20 14:50 GMT

ಬೆಂಗಳೂರು, ಜು.20: ಪದವಿಪೂರ್ವ ಶಿಕ್ಷಣ ಇಲಾಖೆಯು 2016, 2017 ಹಾಗೂ 2018ನೆ ಸಾಲಿನ ಎಂಎಚ್‌ಆರ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

2016ನೇ ಸಾಲಿನಲ್ಲಿ ಕೇಂದ್ರ ಸರಕಾರದ “Direct Benefit ranser (DBT) Programme” ಅಡಿಯಲ್ಲಿ ಎಂಎಚ್‌ಆರ್‌ಡಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಅವರು ದ್ವಿತೀಯ ನವೀಕರಣಕ್ಕೆ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಕೇಂದ್ರ ಸರಕಾರದ ವೆಬ್‌ಸೈಟ್ www.scholarships.gov.in  ನಲ್ಲಿ ಎಂಎಚ್‌ಆರ್‌ಡಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ದ್ವಿತೀಯ ನವೀಕರಣದ ನಿಮಿತ್ತ ಈ ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬಹುದಾಗಿದೆ. ಹಾಗೆಯೆ 2017-2018ನೆ ಸಾಲಿನಲ್ಲಿ ಕೇಂದ್ರ ಸರಕಾರದ “Direct Benefit ranser (DBT) Programme” ನ ಅಡಿಯಲ್ಲಿ ಎಂಎಚ್‌ಆರ್‌ಡಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರಥಮ ನವೀಕರಣಕ್ಕೆ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News