ಎನ್‌ಇಇಟಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Update: 2018-07-20 14:59 GMT

ಹೊಸದಿಲ್ಲಿ, ಜು. 19: ತಮಿಳಿನಲ್ಲಿ ಪರೀಕ್ಷೆ ಬರೆಯುವುದನ್ನು ಆಯ್ಕೆ ಮಾಡಿಕೊಂಡ ಎನ್‌ಇಇಟಿ ವಿದ್ಯಾರ್ಥಿಗಳಿಗೆ ಭಾಷಾಂತರದ ತಪ್ಪಿನ ಕಾರಣಕ್ಕಾಗಿ 196 ಕೃಪಾಂಕ ನೀಡಬೇಕೆಂಬ ಮದ್ರಾಸ್ ಉಚ್ಚ ನ್ಯಾಯಾಲಯದ ಮಧುರೈ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐಸ್‌ಇ ನೀಡಿದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಎ. ಬೋಡೆ ಹಾಗೂ ಎಲ್. ನಾಗೇಶ್ವರ ರಾವ್ ಅವರನ್ನು ಒಳಗೊಂಡ ನ್ಯಾಯಪೀಠ, ಆದೇಶವನ್ನು ರದ್ದುಗೊಳಿಸಿದೆ ಹಾಗೂ ನೋಟಿಸು ಜಾರಿ ಮಾಡಿದೆ.

 ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ ಹಾಗೂ ಈ ಸಮಸ್ಯೆಯ ಪರಿಹಾರದೊಂದಿಗೆ ಬರುವಂತೆ ಸಂಬಂಧಿಸಿದವರಿಗೆ ತಿಳಿಸಿದೆ. ಉಚ್ಚ ನ್ಯಾಯಾಲಯದ ತೀರ್ಪಿನ ಬಳಿಕ ತಮಿಳು ಭಾಷೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಲಾಭವಾಗುತ್ತದೆ. ಇತರರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪೀಠ ಪ್ರತಿಪಾದಿಸಿದೆ. ಎನ್‌ಇಇಟಿ ಪರೀಕ್ಷೆಯ ತಮಿಳು ಆವೃತ್ತಿಯಲ್ಲಿ ಭಾಷಾಂತರದಲ್ಲಿ ದೋಷ ಕಂಡು ಬಂದ 49 ಪ್ರಶ್ನೆಗಳಿಗೆ ತಲಾ 4 ಅಂಕಗಳಂತೆ 196 ಅಂಕಗಳನ್ನು ನೀಡುವಂತೆ ಮದ್ರಾಸ್ ಉಚ್ಚ ನ್ಯಾಯಾಲಯದ ಮಧುರೈ ಪೀಠ ಸಿಬಿಎಸ್‌ಇಗೆ ಆದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News