ನಿವೇಶನದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ರಾಘವೇಶ್ವರ ಶ್ರೀ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾ

Update: 2018-07-20 16:38 GMT

ಬೆಂಗಳೂರು, ಜು.20: ಗಿರಿನಗರದಲ್ಲಿ ಪಾರ್ಕ್‌ಗೆ ಮೀಸಲಿಟ್ಟಿದ್ದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕಚೇರಿ ಆಕ್ಷೇಪಣೆ ಪೂರೈಸುವಲ್ಲಿ ಅರ್ಜಿದಾರರು ನಾಲ್ಕು ಬಾರಿ ವಿಫಲವಾದ ಕಾರಣ ಅರ್ಜಿ ತಂತಾನೆ ವಜಾಗೊಂಡಿದೆ ಎಂದು ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿದ ಪ್ರಕರಣದಲ್ಲಿ ಯಥಾಸ್ಥಿತಿ ಆದೇಶ ಇದ್ದರೂ ಮಠವು, ಗಿರಿನಗರದಲ್ಲಿ ಪುನರ್‌ವಸತಿ ಭವನ ನಿರ್ಮಾಣ ಮುಂದುವರಿಸಿದೆ ಎಂದು ಆರೋಪಿಸಿ ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್, ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಎಡಿಜಿಪಿ ಡಾ.ರಾಜೀವ್ ಶರ್ಮಾ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News