ಮೋದಿ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Update: 2018-07-20 17:42 GMT

ಹೊಸದಿಲ್ಲಿ, ಜು.20: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ನಿರೀಕ್ಷೆಯಂತೆಯೇ ಸೋಲುಂಟಾಗಿದೆ.

126 ಮಂದಿ ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದ್ದರೆ, 325 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶುಕ್ರವಾರ ಇಡೀ ದಿನ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಮೀಸಲಾಗಿದ್ದು,ಸದನದಲ್ಲಿ ಇತರ ಯಾವುದೇ ಕಲಾಪಗಳು ನಡೆಯಲಿಲ್ಲ. ಬುಧವಾರ ಎನ್.ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ತನ್ನ ಬೇಡಿಕೆಗೆ ಒತ್ತು ನೀಡಲು ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಸೂಚನೆಯನ್ನು ಸಲ್ಲಿಸಿದ್ದರೆ,ಕಾಂಗ್ರೆಸ್ ಸೇರಿದಂತೆ ಇತರ ಪ್ರತಿಪಕ್ಷಗಳು ಗೋರಕ್ಷಣೆಯ ಹೆಸರಿನಲ್ಲಿ ದೌರ್ಜನ್ಯ,ಗುಂಪುಗಳಿಂದ ಥಳಿಸಿ ಹತ್ಯೆ,ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ,ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಿರುವುದು ಇವೇ ಮುಂತಾದ ವಿಷಯಗಳಲ್ಲಿ ಅವಿಶ್ವಾಸ ನಿರ್ಣಯ ಸೂಚನೆಗಳನ್ನು ಮಂಡಿಸಿದ್ದವು. ಟಿಡಿಪಿಗೆ ತನ್ನ ಅವಿಶ್ವಾಸ ನಿರ್ಣಯವನ್ನು ಸದನದಲ್ಲಿ ಮಂಡಿಸಲು ಅವಕಾಶ ನೀಡುವುದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News