ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

Update: 2018-07-20 18:15 GMT

ಮಂಗಳೂರು, ಜು.20: ಕರ್ನಾಟಕ ಜಾನಪದ ಅಕಾಡಮಿಯು 2016 ಹಾಗೂ 2017ನೆ ವರ್ಷದಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು-560002 ಇವರಿಗೆ ಆ.10ರೊಳಗೆ ಖುದ್ದಾಗಿ, ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News