ಇರಾ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ರಿಕ್ಷಾಕ್ಕೆ ಬಸ್ ಢಿಕ್ಕಿ; ಏಳು ಮಂದಿಗೆ ಗಾಯ

Update: 2018-07-21 05:16 GMT

ಕೊಣಾಜೆ, ಜು.21: ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೊ ರಿಕ್ಷಾವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಸಮೀಪದ ಮೂಳೂರು ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೂಳೂರು ಏರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮುಡಿಪುವಿನಿಂದ ಇರಾ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ಇರಾ ಕಡೆಯಿಂದ ಮುಡಿಪು ಕಡೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾನೆ.

ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News