ಬಿ.ಸಿ.ರೋಡ್: ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ; ಸಾಮಗ್ರಿಗಳು ಬೆಂಕಿಗಾಹುತಿ
Update: 2018-07-21 15:49 IST
ಬಂಟ್ವಾಳ, ಜು.21: ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ಬಿ.ಸಿ.ರೋಡಿನ ಮೇಲ್ಸೆತುವೆ ಸಮೀಪದಲ್ಲಿ ಶನಿವಾರ ಸಂಭವಿಸಿದೆ.
ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಪಣೋಲಿಬೈಲು ಚೈನೀಸ್ ಫಾಸ್ಟ್ ಫುಡ್ ಎಂಬ ಹೆಸರಿನ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪರಿಣಾಮ ಅಂಗಡಿಯೊಳಗಿದ್ದ ಸಾಮಗ್ರಿಗಳು ಬೆಂಕಿಗೆ ಅಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಸ್ಥಳಕ್ಕೆ ಟ್ರಾಫಿಕ್ ಎಸ್ಸೈ ಯಲ್ಲಪ್ಪ, ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಬೇಟಿ ನೀಡಿ, ಪರಿಶೀಲನೆ ನಡೆಸಿದರು.