ಸಾಮೂಹಿಕ ಅತ್ಯಾಚಾರ: ಸಂತ್ರಸ್ತ ಯುವತಿ ಆತ್ಮಹತ್ಯೆ

Update: 2018-07-21 14:53 GMT

ಭೋಪಾಲ, ಜು.21: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಧ್ಯಪ್ರದೇಶದ ಸಾಗರ್ ಎಂಬಲ್ಲಿ ವರದಿಯಾಗಿದೆ. 16ರ ಹರೆಯದ ಯುವತಿ ಸಂಜೆ ವೇಳೆ ಹೊಲಕ್ಕೆ ಹೋಗಿದ್ದಾಗ ಮೂವರು ಆಕೆಯನ್ನು ಅಪಹರಿಸಿ ಸಮೀಪದಲ್ಲಿದ್ದ ವಾಸವಿಲ್ಲದ ಮನೆಗೆ ಎಳೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಅಲ್ಲಿಗೆ ಬಂದ ಯುವತಿಯ ಅಂಗವಿಕಲ ಸಹೋದರ ರಕ್ಷಣೆಗೆ ಮುಂದಾದಾಗ ಆತನನ್ನು ಆರೋಪಿಗಳು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ನೊಂದ ಯುವತಿ ಬಳಿಕ ಮನೆಗೆ ಬಂದು ಚೂಡಿದಾರದ ಶಾಲ್‌ನಿಂದ ಮನೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿಗಳನ್ನು ಬಂಧಿಸಲಾಗಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕ್ಷಿಪ್ರಗತಿ ನ್ಯಾಯಾಲಯ ರಚಿಸುವ ಮೂಲಕ ವಿಚಾರಣೆ ತ್ವರಿತಗೊಳಿಸುವಂತೆ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರರನ್ನು ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News