ಪ.ಜಾತಿಯ ಕಾನೂನು ಪದವೀಧರರಿಗೆ ಶಿಷ್ಯವೇತನ

Update: 2018-07-21 17:43 GMT

ಉಡುಪಿ, ಜು.21: ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಅನುಷ್ಟಾನ ಮಾಡಿದ್ದು, ಯೋಜನೆಯ ಸರಳೀಕರಣ ಹಾಗೂ ಶಿಷ್ಯವೇತನ ಮಂಜೂರಾತಿ ಗಾಗಿ 2018-19ನೇ ಸಾಲಿನಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಾಗಿರಬೇಕು. ಕಾನೂನು ಪದವಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆ/ ವಿವಿ ಮೂಲಕ 3 ಅಥವಾ 5 ವರ್ಷಗಳ ಕಾನೂನು ಪದವಿಯನ್ನು ಪಡೆದಿರಬೇಕು. ಅರ್ಜಿದಾರ 40 ವರ್ಷ ವಯೋಮಿತಿಯೊಳಗಿರಬೇಕು. ಆಯ್ಕೆಯಾದ ಅ್ಯರ್ಥಿಗಳು 4 ವರ್ಷಗಳ ಕಾಲ ಸತತ ಸರಕಾರಿ ಕೀಲರಲ್ಲಿ ತರಬೇತಿ ಪಡೆಯಬೇಕು.

ಅರ್ಜಿಯನ್ನು ಇಲಾಖೆ ವೆಬ್‌ಸೈಟ್- www.sw.kar.nic.in -ಮೂಲಕ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂ. 0820-2574892, 9480843046) ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News