ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಮಿತಿ ವಿಸರ್ಜನೆ

Update: 2018-07-21 18:55 GMT

ಹೊಸದಿಲ್ಲಿ, ಜು.21: ಅಂತರ್ಜಾಲ ಮಾಧ್ಯಮ ಹಾಗೂ ಇತರ ಅಂತರ್ಜಾಲ ವಿಷಯಗಳನ್ನು ನಿಯಂತ್ರಿಸುವ ಮಾರ್ಗಗಳನ್ನು ರೂಪಿಸಲು ಮಾಹಿತಿ ಮತ್ತು ಪ್ರಸಾರ ಇಲಾಖೆ ರಚಿಸಿರುವ ಸಮಿತಿಯನ್ನು ವಿಸರ್ಜಿಸಲಾಗಿದ್ದು ಇದರ ಕಾರ್ಯವನ್ನು ಇನ್ನು ಮುಂದೆ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(ಎಂಇಐಟಿವೈ)ದ ‘ರಾಷ್ಟ್ರೀಯ ನಿರ್ಣಾಯಕ ಮೂಲಸೌಕರ್ಯದ ಹೂಡಿಕೆ ಮತ್ತು ಡಿಜಿಟಲ್ ಪ್ರಸಾರ’ ಸಮಿತಿಯು ಇನ್ನು ಮುಂದೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಲಿದ್ದು ಎಂಇಐಟಿವೈಯ ಕಾರ್ಯದರ್ಶಿ ಸಮಿತಿಯ ಸಂಚಾಲಕರಾಗಿರುತ್ತಾರೆ. ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಟೆಲಿಕಮ್ಯುನಿಕೇಶನ್ ಇಲಾಖೆಯ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಸೈಬರ್ ಸೆಕ್ಯುರಿಟಿಯ ಸಂಯೋಜಕರು ಸಮಿತಿಯ ಸದಸ್ಯರಾಗಿರುತ್ತಾರೆ. ಸಮಿತಿಯು ಸಂಬಂಧಪಟ್ಟವರನ್ನು ಭೇಟಿಯಾಗಿ, ಅನುಸರಿಸಬೇಕಾದ ವ್ಯವಸ್ಥಿತ ವಿಧಾನದ ಬಗ್ಗೆ ಶಿಫಾರಸು ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News