ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

Update: 2018-07-22 03:53 GMT

ಶ್ರೀನಗರ, ಜು.22: ಜಮ್ಮು ಕಾಶ್ಮೀರದ ಕುಲ್‌ಗಾಂನಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೂವರು ಉಗ್ರಗಾಮಿಗಳು ಬಲಿಯಾಗಿದ್ದಾರೆ. ಇದೇ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅಪಹರಿಸಿ ಹತ್ಯೆ ಮಾಡಿದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಪೊಲೀಸ್  ಪೇದೆ ಸಲೀಂ ಅಹ್ಮದ್ ಶಾ ಅವರನ್ನು ಅಪಹರಿಸಿದ ಸ್ಥಳದಲ್ಲೇ ಕಾರ್ಯಾಚರಣೆ ಆರಂಭಿಸಲಾಗಿದೆ. ಕಥುವಾದಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ಸಲೀಂ ಅಹ್ಮದ್ ಶಾ ರಜೆಯ ಮೇಲೆ ಕುಲಗಾಂಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಅಪಹರಿಸಿ ಹತ್ಯೆ ಮಾಡಲಾಗಿತ್ತು.

ಭಾರತೀಯ ಸೇನೆ, ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಲ್ಲಿ ಮೂರು ಅಥವಾ ನಾಲ್ಕು ಮಂದಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಕೆಲ ಮಂದಿ ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಪತಿವರ್ತನೆಯಾಗಿ, ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತರಾದರು ಎಂದು ಅಧಿಕೃತ ಮೂಲಗಳು ಹೇಳಿವೆ. ಕಾರ್ಯಾಚರಣೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News