ತಮಿಳುನಾಡಿನ ಸೇಲಂನಲ್ಲಿ ಭೂಕಂಪನ

Update: 2018-07-22 08:57 GMT

ಸೇಲಂ, ಜು.22: ತಮಿಳುನಾಡಿನ ಸೇಲಂ ಜಿಲ್ಲೆಯ ಹಲವೆಡೆ ರವಿವಾರ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.3ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ಟೂರು, ಒಮಲ್ಪುರ್ ಹಾಗು ತರಾಮನಲಂನಲ್ಲಿ 5 ಸೆಕೆಂಡುಗಳ ಕಾಲ ಭೂಮಿ ಕಂಪಿಸಿತ್ತು ಎನ್ನಲಾಗಿದೆ.  ಹೆದರಿದ ಜನರು ಮನೆಯಿಂದ ಹೊರಗೆ ಬಂದಿದ್ದರು.

ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಆರ್. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News