ಯಶವಂತಪುರ ವ್ಯಾಪ್ತಿಯ ಎಲ್ಲ ರಸ್ತೆಗಳು ಕಾಂಕ್ರೀಟಿಕರಣ: ಶಾಸಕ ಎಸ್.ಟಿ.ಸೋಮಶೇಖರ್

Update: 2018-07-22 14:48 GMT

ಬೆಂಗಳೂರು, ಜು.22: ಮುಂದಿನ ಎರಡು ವರ್ಷಗಳಲ್ಲಿ ನಗರದ ಯಶವಂತಪುರ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಎಸ್.ಟಿ.ಸೋಮಶೇಖರ್ ಅಭಿಪ್ರಾಯಿಸಿದರು.

ರವಿವಾರ ಚಿಕ್ಕನಹಳ್ಳಿ ಗ್ರಾಮದಲ್ಲಿ ಹೈಮಾಸ್ಕ್ ಬೀದಿ ದೀಪಗಳ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿ, ಗುಂಡಪ್ಪನಪಾಳ್ಯದಲ್ಲಿ ಕಾಂಕ್ರೀಟ್ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೆ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಚರಂಡಿ, ಸಿಮೆಂಟ್ ರಸ್ತೆಗಳನ್ನಾಗಿ ನಿರ್ಮಾಣ ಮಾಡಲಾಗಿದೆ. ಉಳಿದ ರಸ್ತೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಕೃಷಿ ವಿವಿ ಸಿಂಡಿಕೇಟ್ ಸದಸ್ಯ ಚಿಕ್ಕನಹಳ್ಳಿ ಶ್ರೀನಿವಾಸ್ ಮಾತನಾಡಿ, ಯಶವಂತಪುರ ವ್ಯಾಪ್ತಿಯ 60ಹಳ್ಳಿಗಳಿಗೆ ಕಾವೇರಿ ಮತ್ತು ಮಂಚನಬೆಲೆ ಜಲಾಶಯಗಳಿಂದ ಕುಡಿಯುವ ನೀರು ಸರಬರಾಜು, ಒಳಚರಂಡಿ ಕಲ್ಪಿಸಲು ಶಾಸಕರು ಮುಂದಾಗಿರುವುದು ಸಂತಸದ ವಿಚಾರವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಚಂದ್ರಕಲಾ, ಅಧ್ಯಕ್ಷೆ ಮಹಾದೇವಮ್ಮ, ಅಜ್ಜನಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರುದ್ರೇಶ್, ಸದಸ್ಯ ಧನರಾಜ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News