ಉಡುಪಿ: ರಾಷ್ಟ್ರ, ರಾಜ್ಯಮಟ್ಟದ ಸಾಧಕ 27 ಕ್ರೀಡಾಪಟುಗಳಿಗೆ ಸನ್ಮಾನ

Update: 2018-07-22 15:58 GMT

ಉಡುಪಿ, ಜು.22: ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಪದಕ ವಿಜೇತರಾದ ಉಡುಪಿ ಜಿಲ್ಲೆಯ 27 ಮಂದಿ ಕ್ರೀಡಾಪಟುಗಳನ್ನು ಅಭಿನಂದಿಸುವ ಸಮಾರಂಭವನ್ನು ರವಿವಾರ ಮಣಿಪಾಲದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಶ್ರೇಷ್ಠ ಸಾಧನೆ ಮಾಡಲು ಸಾಧ್ಯ. ಏಕಾಗ್ರತೆಯಿಲ್ಲದೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಮತ್ತು ತನ್ನ ಅಂತಃಶಕ್ತಿಯ ಮೇಲೆ ಬಲವಾದ ನಂಬಿಕೆ ಹಾಗೂ ಅನುಭವಿಗಳ ಮಾತುಗಳನ್ನು ಮನನ ಮಾಡುವ ಮೂಲಕ ನಮ್ಮ ಸಾಧನೆಯನ್ನು ಉತ್ತಮಪಡಿಸಿಕೊಳ್ಳಬಹುದು. ಕ್ರೀಡೆಯಲ್ಲಿ ತಮ್ಮ ಸ್ವಂತ ಸಾಧನೆಯಿಂದ ಮೇಲೆ ಯಶಸ್ಸುಗಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಜನರ ಪ್ರೋ ಅಗತ್ಯ ಎಂದರು.

ಸಮಾರಂಭವನ್ನು ಉದ್ಘಾಟಿಸಿದ ನಿಟ್ಟೆಯ ಎನ್‌ಎಂಎಐಟಿ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಚಿಪ್ಳೂಂಕರ್ ಮಾತನಾಡಿ, ಗ್ರಾಮೀಣ ಪ್ರದೇಶ ಗಳಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅವರನ್ನು ಗುರುತಿಸುವ ಕೆಲಸ ಮಾಡಬೇಕಾ ಗಿದೆ. ಯುವಜನರಲ್ಲಿ ಮೊಬೈಲ್ ವ್ಯಾಮೋಹ ಸಮಸ್ಯೆಯಾಗಿ ಕಾಡುತ್ತಿದ್ದು, ಇದರಿಂದ ಸಾಧನೆಗೆ ತೊಡಕಾಗುವ ಅಪಾಯ ಇದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 27 ಮಂದಿ ಸಾಧಕ ಕ್ರೀಡಾ ಪಟುಗಳನ್ನು ಸನ್ಮಾನಿಸಲಾಯಿತು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಸಿಂಡಿಕೇಟ್ ಬ್ಯಾಂಕಿನ ಮಹಾಪ್ರಬಂಧಕ ಭಾಸ್ಕರ್ ಹಂದೆ, ಉದ್ಯಮಿ ಪುರು ಷೋತ್ತಮ್ ಶೆಟ್ಟಿ, ಮಧು ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News