ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2018-07-22 16:59 GMT

ಕೋಟ, ಜು.22: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಕೆದೂರು ಗ್ರಾಮದ ಶಾನಾಡಿ ನಿವಾಸಿ ಚಂದ್ರ(44) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜು.21ರಂದು ರಾತ್ರಿ ವೇಳೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮದುವೆಯಾಗಿ 15 ವರ್ಷವಾದರೂ ಮಕ್ಕಳು ಇಲ್ಲದ ಚಿಂತೆ ಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಜು. 22ರಂದು ಬೆಳಗಿನ ಜಾವ ಮನೆ ಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಬೆಳ್ಮಣ್ ಪುನಾರ್ ನಿವಾಸಿ ಜಯಂತಿ (53) ಎಂಬವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ಬಾಬು ಶೆಟ್ಟಿ ಎಂಬವರ ಮಗಳು ಯಶವಂತಿ (33) ಎಂಬವರು ಮಾನಸಿಕ ಖಿನ್ನತೆಯಿಂದ ಜು.22ರಂದು ಬೆಳಗ್ಗೆ ಮನೆ ಸಮೀಪದ ಸಾಮಾಗ್ರಿ ಕೂಡಿ ಹಾಕುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News