ಗಾಂಜಾ ಸೇವನೆ: ಆರು ಮಂದಿ ಬಂಧನ

Update: 2018-07-22 17:04 GMT

ಮಂಗಳೂರು, ಜು. 22: ನಗರದ ಬಂದರು, ಕುದ್ರೋಳಿ ಮತ್ತು ಕಾರ್‌ಸ್ಟ್ರೀಟ್ ಪ್ರದೇಶಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಮಂದಿ ಯುವಕರನ್ನು ಬಂದರು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 6 ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News