ಅರ್ಧ ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ – ರಾಹುಲ್ ಮಾತುಕತೆ

Update: 2018-07-23 14:27 GMT

ಹೊಸದಿಲ್ಲಿ, ಜು.23: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ಆಗಮಿಸಿದ್ದ ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿಯವರೊಂದಿಗೆ ಅರ್ಧಗಂಟೆಗೂ ಹೆಚ್ಚು ಹೊತ್ತು ಮಾತುಕತೆ ನಡೆಸಿದರು. ರಾಜ್ಯದ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಅಗತ್ಯವನ್ನು ರಾಹುಲ್‌ಗೆ ವಿವರಿಸಿದರು ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಕುರಿತು ಚರ್ಚಿಸಿದರು ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News