×
Ad

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ರಘುಪತಿ ಭಟ್

Update: 2018-07-23 20:14 IST

ಉಡುಪಿ, ಜು.23: ಮಹಾತ್ಮ ಗಾಂಧೀಜಿಯ ಸ್ವಚ್ಛ ಭಾರತ ಪರಿಕಲ್ಪನೆಗೆ ಒಂದು ಸಾಂಸ್ಥಿಕ ರೂಪ ನೀಡಿ ಅದನ್ನು ಜನಾಂದೋಲನಗೊಳಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ. ಪರಿಸರ ಸಂರಕ್ಷಣೆ ಮತ್ತು ಪರಿಸರ ಸ್ವಚ್ಛತೆ ಯುವ ಜನತೆಯ ಹಾಗೂ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸ್ವಚ್ಛ ಭಾರತ್ ಬೇಸಿಗೆ ಪರೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿ ದ್ದರು.
ಸ್ವಚ್ಛ ಭಾರತ್ ಯೋಜನೆಯ ನೋಡಲ್ ಅಧಿಕಾರಿ ಡಾ.ಜಯರಾಮ್ ಶೆಟ್ಟಿಗಾರ್ ಮಾತನಾಡಿ, ಸ್ವಚ್ಛ ಭಾರತ್ ಯೋಜನೆ ದೇಶದ ಎಲ್ಲಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಿಗೆ ಕಡ್ಡಾಯವಾಗಿದ್ದು, ಈಗಾಗಲೇ 3,87,244 ತಂಡಗಳು ಈ ಕಾರ್ಯಕ್ರಮದಲ್ಲಿ ನೊಂದಾಯಿಸಿಕೊಂಡು ಸ್ವಚ್ಛ ಭಾರತಕ್ಕೆ ಪಣತೊಟ್ಟಿವೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ರವಿನಂದನ್ ಭಟ್, ಎನ್‌ಸಿಸಿ ಅಧಿಕಾರಿ ನಾಗ ರಾಜ್, ಯೂತ್ ರೆಡ್‌ಕ್ರಾಸ್ ಸಂಯೋಜಕ ಕಾರ್ತಿಕ್ ನಾಯಕ್ ಉಪಸ್ಥಿತರಿ ದ್ದರು. ನಯನಾ ಆಚಾರ್ಯ ಸ್ವಾಗತಿಸಿದರು. ಚೈತನ್ಯ ವಂದಿಸಿದರು. ವನಿತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News