×
Ad

ಕೊಣಾಜೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2018-07-23 20:41 IST

ಕೊಣಾಜೆ, ಜು. 23: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯು ಹಲವಾರು ಪ್ರಕರಣಗಳಲ್ಲಿ ದಸ್ತಗಿರಿಯಾದ ಮತ್ತು ನ್ಯಾಯಾಂಗ ಬಂಧನದಲ್ಲಿರುವ ಅಬ್ದುಲ್ ಅಝೀಝ್ ಎಂಬಾತನ ಸಹಚರನಾಗಿದ್ದಾನೆ. ಈ ಹಿಂದೆ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ದ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯಿಂದ 300 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ನಿರೀಕ್ಷಕರಾದ ಅಶೋಕ್ ಪಿ, ಸಿಬ್ಬಂದಿಗಳಾದ ಅಶೋಕ್ ಕುಮಾರ್, ನಾಗರಾಜ್, ಉಮೇಶ್ ರಾಠೋಡ್ ಹಾಗೂ ದಕ್ಷಿಣ ಉಪವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News