ಜು.24: ಸಚಿವ ಖಾದರ್ ಜಿಲ್ಲಾ ಪ್ರವಾಸ
Update: 2018-07-23 20:58 IST
ಮಂಗಳೂರು, ಜು.23: ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಜು.24ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜು. 24ರಂದು ಬೆಳಗ್ಗೆ 8 ಗಂಟೆಗೆ ಕಿನ್ಯ ಗ್ರಾಮದ ಕುತುಬಿ ನಗರ ಕುಡಿಯುವ ನೀರಿನ ಸ್ಥಾವರ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸೈಂಟ್ ಅಲೋಶಿಯಸ್ ಡಿಗ್ರಿ ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಶೇರ್ ಆ್ಯಂಡ್ ಕೇರ್ ಕಾಲನಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.